ನವದೆಹಲಿ: 2019-20ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬೆನ್ನಲ್ಲೇ ಶನಿವಾರ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಒಂದು ರೂಪಾಯಿಯಷ್ಟು ಇಂಧನ ಮೇಲಿನ ಸುಂಕವನ್ನು ಬಜೆಟ್‍ನಲ್ಲಿ ಹೆಚ್ಚಳ ಮಾಡಲಾಗಿತ್ತು.
ಶುಕ್ರವಾರ ಮಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 72.21 ರೂಪಾಯಿ ಹಾಗೂ ಡೀಸೆಲ್ ದರ ಲೀಟರ್ ಗೆ 65.84 ರೂಪಾಯಿ ಆಗಿತ್ತು. ಇದೀಗ ಪೆಟ್ರೋಲ್ ಬೆಲೆ ಲೀಟರ್ ಗೆ 2.45 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.36 ರೂಪಾಯಿಗೆ ಏರಿಕೆಯಾಗಿದೆ.
ಎಕ್ಸೈಸ್ ಡ್ಯೂಟಿ ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಹೆಚ್ಚಳ ಮಾಡುವ ಮೂಲಕ ಸುಮಾರು 28 ಸಾವಿರ ಕೋಟಿ ರೂ. ಸಂಗ್ರಹವಾಗುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.