ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 14 ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ರಾಜೀನಾಮೆ ನೀಡಿದ ಶಾಸಕರೆಲ್ಲಾ ಮುಂಬೈ ಸೇರಿಕೊಂಡಿದ್ದು, ಕೆಲವರು ಬೆಂಗಳೂರಿನಲ್ಲೇ ಉಳಿದಿದ್ದಾರೆ. ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕರಾದ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ, ಮುನಿರತ್ನ ರಾಜೀನಾಮೆ ಕೊಟ್ಟಿದ್ದರೂ, ಮುಂಬೈಗೆ ತೆರಳದೇ ಬೆಂಗಳೂರಿನಲ್ಲೇ ತಂಗಿದ್ದಾರೆ. ರಾಜೀನಾಮೆ ನೀಡಿದ ಶಾಸಕರೆಲ್ಲಾ ಮುಂಬೈನಲ್ಲಿ ತಂಗಿದ್ದಾರೆ. ಆದರೆ, ಮುನಿರತ್ನ, ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಅವರು ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ. ಅವರ ಮನವೊಲಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
ತಾವು ನಿರ್ಮಾಣ ಮಾಡಿರುವ ‘ಕುರುಕ್ಷೇತ್ರ’ ಚಿತ್ರದ ಆಡಿಯೋ ರಿಲೀಸ್ ಸಮಾರಂಭ ಹಿನ್ನೆಲೆಯಲ್ಲಿ ಮುನಿರತ್ನ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾರೆ. ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಅವರು ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಾರಣದಿಂದ ಬೆಂಗಳೂರಿನಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.