ಅಡ್ಯನಡ್ಕ: ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ಹೆಣ್ಣುಮಕ್ಕಳಿಗೆ ಮಾಹಿತಿ ನೀಡುವ ಕಾರ್ಯಕ್ರಮವು ಜು.6ರಂದು ಶನಿವಾರ ನಡೆಯಿತು.
ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಸೂಸಮ್ಮ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು. ಆರೋಗ್ಯ ಕೇಂದ್ರದ ಸಿಬ್ಬಂದಿ ರಾಧಾ ಸಿಸ್ಟರ್, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.