Tuesday, January 21, 2025
ರಾಜಕೀಯ

ಸರ್ಕಾರಕ್ಕೆ ಏನೂ ಆಗಲ್ಲ- ಹೆಚ್.ಡಿ.ಕೆ– ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಅಮೆರಿಕದಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಕುರಿತಂತೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕೆ ‘ಬಿಜೆಪಿಯವರು ಏನು ಮಾಡುತ್ತಾರೆ, ಬೇರೆಯವರು ಏನು ಮಾಡುತ್ತಾರೆ ಎಂಬುದು ನನಗೆ ಸಂಬಂಧವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಜವಾಬ್ದಾರಿ ನಿರ್ವಹಣೆ ಮಾಡುವ ಬಗ್ಗೆ ಗಮನಹರಿಸಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ’ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು