Sunday, November 24, 2024
ಸುದ್ದಿ

ಮಂಗಳೂರಿನಲ್ಲಿ ಸೆಕ್ಷನ್ 144 | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಷೀರ್ ಮೃತ್ಯು

 

ಮಂಗಳೂರು : ನಗರದ ಕೊಟ್ಟಾರ ಚೌಕಿ ಬಳಿ ಜನವರಿ 3ರಂದು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಫಾಸ್ಟ್‌ ಫುಡ್‌ ವ್ಯಾಪಾರಿ ಅಬ್ದುಲ್‌ ಬಶೀರ್‌(45) ಜೀವನ್ಮರಣದ ಹೋರಾಟದಲ್ಲಿ ಸೋತು ಇಹಲೋಕ ತ್ಯಜಿಸಿದರು. ಕರಾವಳಿಯಲ್ಲಿ ಸತತವಾಗಿ ನಡೆಯುತ್ತಿರುವ ಕೋಮು ದಳ್ಳುರಿಗೆ ಇನ್ನೊಂದು ಜೀವ ಬಲಿಯಾಯಿತ್ತು. ದೀಪಕ್ ರಾವ್ ಕೊಲೆಗೆ ಪ್ರತಿಕಾರ ಎಂಬಂತೆ ನಡೆದ ಹಲ್ಲೆಯಲ್ಲಿ ತೀವ್ರ ಗಾಯಗೊಂಡ ಬಷೀರ್ ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ಇಂದು ಭಾನುವಾರ ಬೆಳಗ್ಗೆ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಶೀರ್ ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜನವರಿ 3ರಂದು ಕಾಟಿಪಳ್ಳದಲ್ಲಿ ಹಿಂದೂ ಸಂಘಟ ನೆಯ ಕಾರ್ಯಕರ್ತ ದೀಪಕ್‌ ರಾವ್‌ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವುದಕ್ಕೆ ಪ್ರತೀಕಾರವಾಗಿ ಬಶೀರ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು ಎಂದು ಪೋಲೀಸ್ ಕಮಿಷನರ್ ಟಿ ಸುರೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು. ಬಶೀರ್‌ ಸಾವಿನ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದ್ದು ಸೆಕ್ಷನ್‌ 144 ಜಾರಿ ಮಾಡಲಾಗಿದೆ.

Leave a Response