Monday, January 20, 2025
ಸುದ್ದಿ

ಅಧಿಕಾರದ ದುರಾಸೆ ನನಗಿಲ್ಲ: ಶಾಸಕ ರಾಜೇ ಗೌಡ – ಕಹಳೆ ನ್ಯೂಸ್

ಬೆಳ್ತಂಗಡಿ: ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ, ನನ್ನ ಕ್ಷೇತ್ರದ ಗೌರವ ಉಳಿಸುವ ದೃಷ್ಟಿಯಿಂದ ಆಮಿಷಕ್ಕೆ ಒತ್ತಡಕ್ಕೆ ಒಳಗಾಗಲಾರೆ ಎಂದು ಧರ್ಮಸ್ಥಳದಲ್ಲಿ ಕಾಂಗ್ರೆಸ್ ಶಾಸಕ ರಾಜೇ ಗೌಡ ಪ್ರತಿಕ್ರಿಯಿಸಿದ್ದಾರೆ.
ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ರಾಜಕೀಯ ಬೆಳೆವಣಿಗೆ ಕುರಿತು ಮಾಹಿತಿ ಇರಲಿಲ್ಲ.

ಶನಿವಾರ ಕಾರ್ಯಕ್ರಮ ನಿಮಿತ್ತ ಬಂದು ಪ್ರಕೃತಿ ಚಿಕಿತ್ಸೆಗೆ ದಾಖಲಾಗಿದ್ದೆ. ಬಳಿಕ ಇಷ್ಟೊಂದು ಹೈ ಡ್ರಾಮ ನಡೆದಿದೆ. ಬಿ.ಎಸ್. ಯಡಿಯೂರಪ್ಪ, ಹಾಗೂ ಬಿಜೆಪಿ ಇನ್ನಿತರ ಶಾಸಕರು, ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಆದರೆ ಇದಾವುದಕ್ಕೂ ನಾನು ತಲೆಕೆಡಿಸಿ ಕೊಂಡಿಲ್ಲ. ಅಧಿಕಾರದ ದುರಾಸೆ ನನಗಿಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು