Tuesday, January 21, 2025
ರಾಜಕೀಯ

ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ನಡೆದ ಜಟಾಪಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ – ಕಹಳೆ ನ್ಯೂಸ್

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ರಾಜೀನಾಮೆ ಕೊಟ್ಟ ಬಳಿಕ, ವಿಧಾನಸೌಧದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ನಡೆದ ಜಟಾಪಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರದ ಶಾಸಕರ ರಾಜೀನಾಮೆ ಕುರಿತಾಗಿ, ಬಿಜೆಪಿ ನಾಯಕರು ನಮ್ಮ ಪಾತ್ರವಿಲ್ಲ ಎಂದು ಹೇಳುತ್ತಿದ್ದರು. ಆದರೆ ಡಾ.ಕೆ. ಸುಧಾಕರ್ ವಿಚಾರದಲ್ಲಿ ಆಧಾರ ಸಮೇತ ಸಿಕ್ಕಿಬಿದ್ದಿದ್ದಾರೆ. ಸುಧಾಕರ್ ಕಾಂಗ್ರೆಸ್‍ನ ಶಾಸಕರು, ನಮ್ಮ ಶಾಸಕರ ರಕ್ಷಣೆ ಮಾಡಲು ಬಿಜೆಪಿ ಶಾಸಕರು ಯಾರು? ನಮ್ಮ ಶಾಸಕರ ಜತೆ ನಾವು ಮಾತನಾಡುವುದನ್ನು ತಪ್ಪಿಸಲು ಬಿಜೆಪಿ ಶಾಸಕರು ವಿಧಾನಸೌಧದಲ್ಲೇ ಗೂಂಡಾಗಳ ರೀತಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು