Wednesday, January 22, 2025
ಸುದ್ದಿ

ದಕ್ಷ ಅಧಿಕಾರಿ ಮಧುಕರ್ ಶೆಟ್ಟಿಯ ಹೆಸರು ಇನ್ನು ಮುಂದೆ ಈ ವೃತ್ತಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ವೃತ್ತವೊಂದಕ್ಕೆ ಮಧುಕರ್ ಶೆಟ್ಟಿಯವರ ಹೆಸರನ್ನಿಡಲು ತೀರ್ಮಾನಿಸಲಾಗಿದೆ. ವೈಟ್ ಫೀಲ್ಡ್ ನಲ್ಲಿರುವ ಕೋಡಿ ವೃತ್ತಕ್ಕೆ ದಿವಂಗತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಹೆಸರಿಟ್ಟು, ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು. ದಕ್ಷ ಹಾಗು ಪ್ರಾಮಾಣಿಕ ಜನಪರ ಕಾಳಜಿಯ ಅಧಿಕಾರಿ ಎಂದೇ ಖ್ಯಾತರಾಗಿದ್ದ ಉಡುಪಿ ಮೂಲದ ಮಧುಕರ್ ಶೆಟ್ಟಿ ಹೈದರಾಬಾದ್‍ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಕಳೆದ ವರ್ಷ ಡಿಸೆಂಬರ್‍ ನಲ್ಲಿ ಹಠಾತ್ತನೆ ಅನಾರೋಗ್ಯಕ್ಕೀಡಾಗಿ ನಿಧನರಾಗಿದ್ದರು. ಇವರು ಖ್ಯಾತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವೈಟ್ ಫೀಲ್ಡ್ ಮಾಜಿ ಡಿಸಿಪಿ ಹಾಗು ಮಧುಕರ್ ಶೆಟ್ಟಿ ಅವರ ಇತರ ಮಿತ್ರರು ಈ ಪ್ರದೇಶದಲ್ಲಿ ಮಧುಕರ್ ಶೆಟ್ಟಿ ಅವರ ಹೆಸರನ್ನು ಯಾವುದಾದರೂ ವೃತ್ತಕ್ಕೆ ಇಡಬೇಕು ಎಂದು ಆಗ್ರಹಿಸಿದ್ದರು. ಹಗದೂರು ಕಾರ್ಪೊರೇಟರ್ ಎಸ್ ಉದಯ್ ಕುಮಾರ್ ಅವರು ಈ ಬಗ್ಗೆ ಬಿಬಿಎಂಪಿ ನಗರ ಯೋಜನೆ ಸ್ಥಾಯಿ ಸಮಿತಿಗೆ ಪ್ರಸ್ತಾವ ಸಲ್ಲಿಸಿದ್ದರು. ಈಗ ಈ ಪ್ರಸ್ತಾವಕ್ಕೆ ಮನ್ನಣೆ ಸಿಕ್ಕಿದ್ದು, ಬಿಬಿಎಂಪಿ ಸಾಮಾನ್ಯ ಸಭೆ ಇದನ್ನು ಅಂಗೀಕರಿಸಿದೆ. ವಾರ್ಡ್ ಅಭಿವೃದ್ಧಿಗೆ ಮೀಸಲಾದ ಹಣದಲ್ಲಿ ಈ ಪ್ರತಿಮೆ ನಿರ್ಮಾಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಉದಯ್ ಕುಮಾರ್ ಹೇಳಿದ್ದಾರೆ.