Wednesday, January 22, 2025
ರಾಜಕೀಯ

ರಾಜೀನಾಮೆ ನೀಡಿದ ಶಾಸಕರಿಗೆ ಸೂಕ್ತ ಭದ್ರತೆ ನೀಡಲು ಸುಪ್ರೀಂ ಸೂಚನೆ – ಕಹಳೆ ನ್ಯೂಸ್

ಕರುನಾಡಿನ ರಾಜಕೀಯದ ಡ್ರಾಮ ತಂಡ ಮುಂಬೈ ತಲುಪಿದ್ದು ಗೊತ್ತೇ ಇದೆ. ಈಗ ಈ ಜಗಳ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು ಕೆಲವೊಂದು ನಿರ್ದೇಶನಗಳನ್ನು ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ರಾಜೀನಾಮೆ ನೀಡಿರುವ ಶಾಸಕರು ಇಂದು ಸಂಜೆ 6 ಗಂಟೆಯೊಳಗಾಗಿ ಸ್ಪೀಕರ್ ಅವರ ಮುಂದೆ ಹಾಜರಾಗಲು ನ್ಯಾಯಾಲಯ ಆದೇಶಿಸಿದೆ. ಅಂತೆಯೇ ರಾಜೀನಾಮೆ ನೀಡಿದ ಶಾಸಕರುಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ, ಮುಂಬೈನಲ್ಲಿರುವ ಎಲ್ಲ ಶಾಸಕರುಗಳು ಇಂದು ಬೆಂಗಳೂರಿಗೆ ವಾಪಸ್ಸಾಗಿ ಸ್ಪೀಕರ್ ಮುಂದೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು