Sunday, November 24, 2024
ರಾಜಕೀಯ

ನಾನು ಯಾಕೆ ರಾಜೀನಾಮೆ ಕೊಡಬೇಕು..? ಅಂದು ಯಡಿಯೂರಪ್ಪ ಕೊಟ್ಟಿದ್ರಾ?: ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಯಾಕೆ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ರಾ ಎಂದು ಕುಮಾರಸ್ವಾಮಿ ಮಾತಿನ ಛಾಟಿ ಎಸೆಯುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಅತೃಪ್ತ ಶಾಸಕರ ರಾಜೀನಾಮೆ ಪರ್ವದ ನಡುವೆಯೂ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮುಂದುವರಿದಂತಾಗಿದೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 17 ಶಾಸಕರು ರಾಜೀನಾಮೆ ನೀಡಿದ್ರಲ್ಲ, ಆಗ ಅವರು ರಾಜೀನಾಮೆ ನೀಡಿದ್ರಾ ಎಂದು ತಿರುಗೇಟು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

2009ರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಪುಟದಿಂದ ಕೈಬಿಡಬೇಕು, ಕೆಲವು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಹೀಗೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಜನಾರ್ದನ ರೆಡ್ಡಿ ನೇತೃತ್ವದ ಬಣ ಬಂಡಾಯ ಸಾರಿತ್ತು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು 17 ಮಂದಿ ಶಾಸಕರು ಪಟ್ಟು ಹಿಡಿದಿದ್ದರು. ಆದರೆ ಅಂದು ಸ್ಪೀಕರ್ ಆಗಿದ್ದ ಕೆಜಿ ಬೋಪಯ್ಯ ಐವರು ಪಕ್ಷೇತರರು ಸೇರಿದಂತೆ 17 ಮಂದಿ ಶಾಸಕರನ್ನು ಅನರ್ಹಗೊಳಿಸಿದ್ದರು.
2009ರ ಅಕ್ಟೋಬರ್‍ ನಲ್ಲಿ ವಿಧಾನಸಭೆಯಲ್ಲಿ ನಡೆದ ಗದ್ದಲ, ಕೋಲಾಹಲ ಇಡೀ ದೇಶದ ಗಮನವನ್ನೇ ಸೆಳೆದು ಶಾಸಕರ ವರ್ತನೆಗೆ ಸಾರ್ವತ್ರಿಕವಾಗಿ ಖಂಡನೆ ವ್ಯಕ್ತವಾಗಿತ್ತು. ಆದರೆ ಈ ಗದ್ದಲದ ನಡುವೆಯೇ ಬಿಎಸ್‍ವೈ ಧ್ವನಿ ಮತದ ಮೂಲಕ ವಿಶ್ವಾಸಮತ ಗೆದ್ದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು