Wednesday, January 22, 2025
ಸುದ್ದಿ

ಅಯೋಧ್ಯೆ ಮಹತ್ವದ ತೀರ್ಪು ಮುಂದೂಡಿದ ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕೇ? ಬೇಡವೇ? ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ಇಂದು ಮಹತ್ವ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್ ನೇಮಿಸಿರುವ ಮೂವರು ಸಂಧಾನಕಾರರು ತಮ್ಮ ವರದಿಯನ್ನು ಜುಲೈ 18ರೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಜೊತೆಗೆ ಈ ಕುರಿತಂತೆ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಲಾಗಿದೆ. ಸಂಧಾನ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆ ಸಮಿತಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲ ಎಂದು ಸುಪ್ರೀಂಕೋರ್ಟಿಗೆ ಅರ್ಜಿದಾರರು ತಿಳಿಸಿದ ಬಳಿಕ, ಸಂಧಾನಕಾರರ ಪ್ರಗತಿ ವರದಿ ಬಂದ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ನೇತೃತ್ವದ ನ್ಯಾಯಪೀಠವು ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು