Thursday, January 23, 2025
ರಾಜಕೀಯ

ಸಂಜೆ 6 ಗಂಟೆಯೊಳಗೆ ರಾಜೀನಾಮೆ ವಿಷಯ ಇತ್ಯರ್ಥ ಸಾಧ್ಯವಿಲ್ಲ: ಸುಪ್ರೀಂ ಮೆಟ್ಟಿಲೇರಿದ ಸ್ಪೀಕರ್ ರಮೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನು ಸಂಜೆ 6 ಗಂಟೆಯೊಳಗೆ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್‍ಗೆ ಹೇಳಿದ್ದಾರೆ.

ಸ್ಪೀಕರ್ ಆಗಿರುವ ನೀವು ನನಗೆ ಆದೇಶಿಸಲು ಸಾಧ್ಯವಿಲ್ಲ, ಅಸೆಂಬ್ಲಿ ನಿಯಾಮಾವಳಿಗಳ ಪ್ರಕಾರ ನಾನು ಕ್ರಮ ತೆಗೆದುಕೊಳ್ಳುತ್ತೇನೆ, ಸ್ಪೀಕರ್ ಆಗಿ ಸಾಂವಿಧಾನಿಕ ನಿಯಮಗಳನ್ನು ಪಾಲಿಸಬೇಕಿದೆ, ವಿಚಾರಣೆಯನ್ನು ಮಧ್ಯರಾತ್ರಿ 12 ಗಂಟೆಗೊಳಗೆ ಇತ್ಯರ್ಥಮಾಡಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್‍ಗೆ ತಿಳಿಸಿದ್ದಾರೆ. ರಾಜೀನಾಮೆ ಸ್ವಯಂ ಪ್ರೇರಿತವೋ ಅಥವಾ ಬಲವಂತವೋ ಎಂಬ ಬಗ್ಗೆ ತನಿಖೆ ನಡೆಸಬೇಕು. ಹೀಗಾಗಿ ಅರ್ಜಿಯ ವಿತರಣೆ ಸಂಬಂಧ ಏಕಾಏಕಿ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ಎಂದು ವಿವರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಇಂದು ಸಂಜೆ 6 ಗಂಟೆಯೊಳಗೆ ಖುದ್ದಾಗಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿತ್ತು. ಅಲ್ಲದೆ ಸ್ಪೀಕರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದೇ ನಿರ್ಧಾರ ಕೈಗೊಳ್ಳಬೇಕು. ಆ ನಿರ್ಧಾರವನ್ನು ನಾಳೆ ತನಗೆ ತಿಳಿಸಬೇಕೆಂದೂ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು