Monday, January 20, 2025
ರಾಜಕೀಯಸುದ್ದಿ

ಮತ್ತೆ ಕ್ರಮಬದ್ಧವಾಗಿ ಕೈ ಬರಹದಲ್ಲೇ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು – ಕಹಳೆ ನ್ಯೂಸ್

ಬೆಂಗಳೂರು: ಕೈ ಮತ್ತು ತೆನೆ ಪಕ್ಷದ ಕೆಲವು ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಅವರಲ್ಲಿ ಕೆಲವರ ರಾಜೀನಾಮೆ ಕ್ರಮಬದ್ಧವಾಗಿ ಇಲ್ಲ ಎಂದು ಸ್ಪೀಕರ್ ಹೇಳಿದ್ದ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಘಟನೆ ಕುತೂಹಲ ಕೆರಳಿಸಿದೆ.

ವಿಧಾನಸೌಧಕ್ಕೆ ಆಗಮಿಸಿದ ಶಾಸಕರು ಸ್ಪೀಕರ್ ಕಚೇರಿಗೆ ತೆರಳಿ ಕ್ರಮಬದ್ಧವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿ ಇಲ್ಲ ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕೈಬರಹದಲ್ಲಿ ಶಾಸಕರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈನಿಂದ ಬಂದಿಳಿದ ಅತೃಪ್ತ ಶಾಸಕರು ಬಿಗಿಭದ್ರತೆಯಲ್ಲಿ ಸ್ಪೀಕರ್ ಕಚೇರಿಗೆ ತೆರಳಿದ್ದಾರೆ. ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಕೈಬರಹದ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸ್ಪೀಕರ್ ಕಚೇರಿಯಲ್ಲಿ ಶಾಸಕರಿದ್ದು, ಕ್ರಮಬದ್ಧವಾಗಿ ರಾಜೀನಾಮೆ ಸಲ್ಲಿಸಿದ ಶಾಸಕರಿಂದ ಸ್ಪೀಕರ್ ವಿವರಣೆ ಪಡೆದುಕೊಂಡಿದ್ದಾರೆ. ಸ್ಪೀಕರ್ ಕಚೇರಿ ವಿಧಾನಸೌಧ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು