Tuesday, January 21, 2025
ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟೊಯೋಟಾ: ಮೂವರು ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾವೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗಿನ ಜಾವ ಚಿಕ್ಕಮಗಳೂರು ತಾಲ್ಲೂಕಿನ ಉದ್ದೇಬೋರನಹಳ್ಳಿ ಬಳಿ ನಡೆದಿದೆ.

ಮಹೇಶ್, ನಾಗರಾಜ್, ಸುರೇಶ ಅಪಘಾತದಲ್ಲಿ ಮೃತಪಟ್ಟವರು. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿಯವರು ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಧರ್ಮಸ್ಥಳಕ್ಕೆ ಬಂದಿದ್ದ ಈ ಆರು ಮಂದಿ ಮಂಜುನಾಥ ದರ್ಶನ ಪಡೆದು ಮರಳಿ ಬಳ್ಳಾರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡೂರು ತಾಲ್ಲೂಕಿನ ಸಖರಾಯ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು