Tuesday, January 21, 2025
ರಾಜಕೀಯ

ದೇವರ ಆಶೀರ್ವಾದ ಇರುವವರೆಗೂ ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ: ಹೆಚ್.ಡಿ.ರೇವಣ್ಣ – ಕಹಳೆ ನ್ಯೂಸ್

ಮೈಸೂರು : ಇದು ದೇವರು ಕೊಟ್ಟಿರುವ ಸರ್ಕಾರ, ದೇವರ ಆಶೀರ್ವಾದ ಇರುವವರೆಗೂ ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ ಎಂದು ಸಚಿವ ಹೆಚ್.ಡಿ.ರೇವಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಆಶೀರ್ವಾದ ಇರುವವರೆಗೂ ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ, ಚಾಮುಂಡೇಶ್ವರಿಯ ಅನುಗ್ರಹ ಕುಮಾರಸ್ವಾಮಿ ಮೇಲಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಏನು ತೊಂದರೆ ಇಲ್ಲ. ಕುಮಾರಸ್ವಾಮಿಗೆ ಸರ್ಕಾರ ಅವಶ್ಯಕತೆ ಇಲ್ಲ. ಆದರೆ, ರಾಜ್ಯದ ಜನರಿಗೆ ಕುಮಾರಸ್ವಾಮಿಯವರ ಅವಶ್ಯಕತೆ ಇದೆ. ಇಂದು ಕೂಡ ಸರ್ಕಾರಕ್ಕೆ ಏನೂ ಆಗಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು