ನಾಳೆ ಕಡಬದಲ್ಲಿ ಪತ್ರಕರ್ತರ ದಿನಾಚರಣೆ; ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ವಿಜಯಲಕ್ಷ್ಮಿ ಶಿಬರೂರು ಕಡಬಕ್ಕೆ – ಕಹಳೆ ನ್ಯೂಸ್
ಕಡಬ: ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ನಾಳೆ ಶನಿವಾರದಂದು ಅದ್ದೂರಿಯಾಗಿ ಆಚರಿಸಲಿದ್ದಾರೆ. ಕಡಬದ ವಿದ್ಯಾನಗರದಲ್ಲಿರುವ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ. ಶಿವರಾಮಯ್ಯರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುತ್ತೂರು ಪೋಲಿಸ್ ಉಪವಿಭಾಗದ ಉಪ ಅಧೀಕ್ಷಕ ದಿನಕರ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಪ್ರಭಾಷಣಗಾರರಾಗಿ ದೃಶ್ಯ ಮಾಧ್ಯಮದ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ, ತನಿಖಾ ವರದಿ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಹಾಗೂ ಸರಸ್ವತೀ ವಿದ್ಯಾಲಯದ ಅಧ್ಯಕ್ಷ ರವಿರಾಜ್ ಶೆಟ್ಟಿ, ಸಂಚಾಲಕ ವೆಂಕಟ್ರಮಣ ರಾವ್ ಗೌರವ ಉಪಸ್ಥಿತ ಇರಲಿದ್ದಾರೆ.
ಸಭಾ ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಯನ್ನು ಗುರುತಿಸಿ ಅಭಿನಂದನಾ ಕಾರ್ಯಕ್ರಮವು ನಡೆಯಲಿದ್ದು ನಂತರದಲ್ಲಿ ವಿಜಯಲಕ್ಷ್ಮಿ ಶಿಬರೂರು ಅವರಿಂದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಲಿದ್ದಾರೆ ಎಂದು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊಯಿಲ ಹಾಗೂ ಕಾರ್ಯದರ್ಶಿ ನಾಗರಾಜ್ ಎನ್.ಕೆ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.