Wednesday, January 22, 2025
ಸುದ್ದಿ

ಫಿಲೋಮಿನಾ ವಿದ್ಯಾರ್ಥಿನಿಗೆ ವಿವಿ ಮಟ್ಟದಲ್ಲಿ ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ಉಡುಪಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಒಕ್ಕೂಟ ಇವುಗಳ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ‘ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ’ ಕುರಿತು ವಿವಿ ಮಟ್ಟದ ಭಾಷಣ ಸ್ಪರ್ಧೆ ನಡೆದಿತ್ತು. ಈ ಸ್ಪಧೆಯಲ್ಲಿ ಭಾಗವಹಿಸಿದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಶ್ರೀದೇವಿ ಕೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರನ್ನು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಭಾಸ್ಕರ ಶೆಟ್ಟಿ ಎಸ್, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ರಾಮರಾಯ ಆಚಾರ್ಯ, ಐಕ್ಯೂಎಸಿ ಸಂಯೋಜಕ ಪ್ರೊ. ಸೋಜನ್ ಕೆ ಜಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿತ್ಯಾನಂದ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಒಕ್ಕೂಟದ ಕಾರ್ಯದರ್ಶಿ ಪ್ರೊ. ಸುಧಾಕರ್ ಪಿ ಬಹುಮಾನ ನೀಡಿ ಗೌರವಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು