Wednesday, January 22, 2025
ರಾಜಕೀಯ

ಕುಮಾರಸ್ವಾಮಿ ವಿಶ್ವಾಸ ಮತಯಾಚನೆ: ರೆಸಾರ್ಟ್‍ಗೆ ತೆರಳಿದ ಕಾಂಗ್ರೆಸ್, ಬಿಜೆಪಿ ಶಾಸಕರು! – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಮ್ಮೆ ರೆಸಾರ್ಟ್ ರಾಜಕೀಯ ಆರಂಭವಾಗುವ ಎಲ್ಲಾ ಲಕ್ಷಣಗಳು ಗೋಚಾರವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ರೆಸಾರ್ಟ್‍ಗೆ ಕಳಿಸಲು ಆಯಾ ಪಕ್ಷಗಳು ತೀರ್ಮಾನಿಸಿವೆ. ಜೆಡಿಎಸ್ ಶಾಸಕರು ಈಗಾಗಲೇ ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಶ್ವಾಸಮತ ಸಾಬೀತು ಮಾಡಲಿದ್ದೇನೆ ಎಂದು ಘೋಷಣೆ ಮಾಡಿದರು. ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಗಂಟೆಗೆ ಮುಂದೂಡಲಾಗಿದೆ. ವಿಶ್ವಾಸಮತ ಯಾಚನೆ ಮಾಡಲು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಸಮಯ ನಿಗಧಿ ಮಾಡಬೇಕಿದೆ. ಶನಿವಾರ ಮತ್ತು ಭಾನುವಾರ ವಿಧಾನಸಭೆ ಕಲಾಪ ಇಲ್ಲದಿರುವುದರಿಂದ ಶಾಸಕರನ್ನು ರೆಸಾರ್ಟ್‍ಗೆ ಕಳಿಸಲು ಕಾಂಗ್ರೆಸ್, ಬಿಜೆಪಿ ತೀರ್ಮಾನಿಸಿವೆ. ಸಿದ್ಧಿ ವಿನಾಯಕನಿಗೆ ಶರಣು ಶರಣೆಂದ ಅತೃಪ್ತ ಶಾಸಕರು ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ಶಾಸಕರನ್ನು ಸೆಳೆಯಬಹುದು ಎಂಬ ಭಯ ಕಾಂಗ್ರೆಸ್ ಮತ್ತು ಬಿಜೆಪಿಗೆ ಇದೆ. ಆದ್ದರಿಂದ, ರೆಸಾರ್ಟ್‍ಗೆ ಶಾಸಕರನ್ನು ಕರೆದೊಯ್ಯಲು ಪಕ್ಷಗಳು ತೀರ್ಮಾನಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇವನಹಳ್ಳಿ ಬಳಿಯ ಗಾಲ್ಫ್ ಶೈರ್ ರೆಸಾರ್ಟ್‍ನಲ್ಲಿ ತೆನೆ ಶಾಸಕರು ಕಳೆದ 5 ದಿನಗಳಿಂದ ವಾಸ್ತವ್ಯ ಹೂಡಿದ್ದಾರೆ. ಇಂದು ರೆಸಾರ್ಟ್‍ನಿಂದಲೇ ಎಲ್ಲಾ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು. ಸೋಮವಾರದ ತನಕ ರೆಸಾರ್ಟ್ ವಾಸ್ತವ್ಯ ಮುಂದುವರೆಸಲು ಪಕ್ಷ ತೀರ್ಮಾನಿಸಿದೆ.

ಕಾಂಗ್ರೆಸ್ ಸಹ ಶಾಸಕರನ್ನು ರೆಸಾರ್ಟ್‍ಗೆ ಕಳಿಸಲು ತೀರ್ಮಾನಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ 11 ಕಿ.ಮೀ. ದೂರದಲ್ಲಿರುವ ಕ್ಲಾಕ್ರ್ಸ್ ಎಕ್ಸೋಟಿಕಾ ಕನ್ವೆನ್ಷನ್ ರೆಸಾರ್ಟ್‍ನಲ್ಲಿ ಶನಿವಾರ ಮತ್ತು ಭಾನುವಾರ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರು ಮುಂಬೈನಲ್ಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತಯಾಚನೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ ಬಳಿಕ ಬಿಜೆಪಿಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ. ಆದ್ದರಿಂದ, ಶಾಸಕರನ್ನು ರೆಸಾಟ್ರ್ಗೆ ಕಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯ 105 ಶಾಸಕರು ರೆಸಾರ್ಟ್‍ಗೆ ತೆರಳಲಿದ್ದು, ಸೋಮವಾರ ವಾಪಸ್ ಆಗಲಿದ್ದಾರೆ.