ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ವಾರ್ಷಿಕ ಮಹಾಸಭೆಯು ಇಂದು ಪ್ರೆಸ್ ಕ್ಲಬ್ ಆವರಣದಲ್ಲಿ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ವಾರ್ಷಿಕ ಚಟುವಟಿಕೆಗಳ ಬಗ್ಗೆ ಸಮಾಲೋಚಿಸಲಾಯಿತು. 2019 ಮತ್ತು 20ರ ಸಾಲಿನ ನೂತನ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಅಮರ ಸುಳ್ಯ ಸುದ್ದಿ ಪತ್ರಿಕೆಯ ಸಂಪಾದಕ ಮುರಳೀಧರ ಅಡ್ಡನಪಾರೆ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಸುಳ್ಯ ವರದಿಗಾರ ಗಿರೀಶ್ ಅಡ್ಪಂಗಾಯ ಆಯ್ಕೆಯಾದರು. ಕೋಶಾಧಿಕಾರಿಯಾಗಿ ಕಹಳೆ ನ್ಯೂಸ್ ಸುಳ್ಯ ವರದಿಗಾರ ಸತೀಶ್ ಹೊದ್ದೆಟ್ಟಿ, ಹಾಗೂ ಉಪಾಧ್ಯಕ್ಷರಾಗಿ ಮಹೇಶ್ ಪುಚ್ಚಪಾಡಿ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರುಗಳಾದ ಲೋಕೇಶ್ ಪೆಲರ್ಂಪಾಡಿ, ಹಾಗೂ ಗಂಗಾಧರ ಕಲ್ಲಪಳ್ಳಿ ವೇದಿಕೆಯಲ್ಲಿದ್ದರು. ಎಲ್ಲಾ ಮಾದ್ಯಮಗಳ ವರದಿಗಾರರು ಉಪಸ್ಥಿತಿಯಿದ್ದರು