Wednesday, January 22, 2025
ರಾಜಕೀಯಸುದ್ದಿ

ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದು ಹೇಳಿದ್ದೇನು..?

ಬೆಂಗಳೂರು: ಶಾಸಕರ ರಾಜೀನಾಮೆ ಪ್ರಹಸನದ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಜು.12 ರಂದು ವಿಧಾನಮಂಡಲ ಅಧಿವೇಶನ ಪ್ರಾರಂಭವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ವಿಶ್ವಾಸಮತ ಯಾಚನೆಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಾವೆಲ್ಲಾ ಚರ್ಚಿಸಿಯೇ ವಿಶ್ವಾಸಮತಯಾಚನೆಗೆ ನಿರ್ಧರಿಸಿದ್ದೇವೆ. ಬಹುಮತ ಇಲ್ಲದೇ ಸಿಎಂ ವಿಶ್ವಾಸಮತ ಯಾಚನೆಗೆ ಮುಂದಾಗುತ್ತಾರಾ? ಎಂದು ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವ ರೀತಿ ವಿಶ್ವಾಸಮತ ಸಾಬೀತು ಪಡಿಸುತ್ತಾರೆಂಬುದನ್ನು ಹೇಳುವುದಕ್ಕೆ ಆಗುತ್ತಾ? ಎಂದು ಕೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರ ರಾಜೀನಾಮೆ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರ ರಾಜೀನಾಮೆ ಹಾಗೂ ಅನರ್ಹತೆ ಕುರಿತು ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಎಂಟಿಬಿ ನಾಗರಾಜ್, ಸುಧಾಕರ್ ಮುಂಬೈ ಗೆ ಹೋಗಿಲ್ಲ, 10 ಜನ ಶಾಸಕರಷ್ಟೇ ಮುಂಬೈ ಗೆ ಹೋಗಿದ್ದಾರೆ. ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡುತ್ತಿದ್ದೇವೆ ರೋಷನ್ ಬೇಗ್ ನ್ನು ಹೊರತುಪಡಿಸಿ ಉಳಿದ ಎಲ್ಲರೊಂದಿಗೂ ಮಾತನಾಡುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು