Monday, January 20, 2025
ಸುದ್ದಿ

ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಈ ತಿಂಗಳಲ್ಲಿ 124 ಮಂದಿಗೆ ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವುದು ದೃಢಪಟ್ಟಿದೆ. ಈ ಪೈಕಿ 30 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 400 ಮಂದಿಯಲ್ಲಿ ಡೆಂಗ್ಯೂ ಮಾದರಿಯ ಜ್ವರ ಕಾಣಿಕೊಂಡಿದ್ದು, ಈ ಪೈಕಿ 124 ಮಂದಿಯಲ್ಲಿ ಡೆಂಗ್ಯೂ ಜ್ವರ ದೃಢಪಟ್ಟಿದೆ.

ಗುರುವಾರದವರೆಗೆ 39 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ 9 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಉಳಿದ 30 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದಾರೆ ಎಂದು ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ| ನವೀನ್‍ಚಂದ್ರ ಕುಲಾಲ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಹಲವು ಪ್ರದೇಶದಲ್ಲಿ ಸೊಳ್ಳೆ ಉತ್ಪತ್ತಿ ತಾಣ ಹೆಚ್ಚುತ್ತಿದೆ. ಇದರಿಂದ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಅಧಿಕವಾಗಿದೆ. ಜನ ಆದಷ್ಟು ಸುತ್ತಮುತ್ತಲಿನ ಪ್ರದೇಶ, ಮನೆಯ ಮಹಡಿಗಳಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಶುದ್ಧ ನೀರು ಮತ್ತು ಕೊಳಚೆ ನೀರು ಎರಡರಲ್ಲೂ ಸೊಳ್ಳೆ ಉತ್ಪತ್ತಿ ಆಗುವುದರಿಂದ ಎಲ್ಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಬೇವಿನ ಎಣ್ಣೆ ಮುಂತಾದವನ್ನು ಹಚ್ಚಿ ಮಲಗಬೇಕು ಎಂದು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಲೇರಿಯಾ, ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ನಗರ ಪಾಲಿಕೆಯಿಂದ ನಿರಂತರ ಸಮೀಕ್ಷೆ ಮತ್ತು ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒ ಡಾ| ಸೆಲ್ವಮಣಿ ಮಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದ್ದಾರೆ.