Wednesday, January 22, 2025
ಸುದ್ದಿ

ಕಾರು-ಲಾರಿ ಡಿಕ್ಕಿ: ಸ್ನೇಹಿತನ ಬರ್ತಡೇಗೆಂದು ತೆರಳುತ್ತಿದ್ದ ಓರ್ವ ಗಾಯ, ಇಬ್ಬರು ದುರ್ಮರಣ – ಕಹಳೆ ನ್ಯೂಸ್

ಬೆಂಗಳೂರು: ಸ್ನೇಹಿತನ ಬರ್ತಡೇಗೆಂದು ಕೇರಳಕ್ಕೆ ತೆರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಸಮೀಪ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಸುಳಗಿರಿ ಸಮೀಪದ ಚಿನ್ನಾರಯಲ್ಲಿ ಈ ದುರ್ಘಟನೆ ನಡೆದಿದ್ದು ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೇರಳ ಮೂಲದವರಾದ ಕಾರ್ ಚಾಲಕ ಹರೀಶ್ ಹಾಗೂ ಪ್ರಭು ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರ ರಾತ್ರಿ ಒಟ್ಟು ಮೂವರು ಸ್ನೇಹಿತರು ಸ್ನೇಹಿತನ ಬರ್ತಡೇ ಪಾರ್ಟಿ ಆಚರಣೆಗಾಗಿ ಕೇರಳಕ್ಕೆ ತೆರಳುತ್ತಿದ್ದರು.ರಾತ್ರಿ ನಿದ್ರೆಯ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ಕಾರು ಹಿಂದಿನಿಂದ ಲಾರಿಗೆ ಗುದ್ದಿದೆ. ಅಪಘಾತದಲ್ಲಿ ಗಾಯಗೊಂಡಿದ್ದವನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸುಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.