ನೇಪಾಳದಲ್ಲಿ ಭಾರಿ ಮಳೆಯುಂಟಾಗುತ್ತಿರುವುದರಿಂದ, ಪ್ರವಾಹದಲ್ಲಿ ಮೃತ ಪಟ್ಟವರ ಸಂಖ್ಯೆ ಇಂದಿಗೆ 43ಕ್ಕೆ ಏರಿಕೆಯಾಗಿದೆ.
ಅಲ್ಲದೆ 24ಕ್ಕೂ ಹೆಚ್ಚಿನ ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೇಪಾಳದ ಹಲವೆಡೆ ಭೂಕುಸಿತದ ಅಪಾಯ ಎದುರಾಗಿದೆ. ಎಲ್ಲಾ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಮುಳುಗಡೆ ಪ್ರದೇಶಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ನೂರಾರು ಗಂಜಿ ಕೇಂದ್ರಗಳನ್ನು ತೆರೆದು, ಜನರಿಗೆ ಆಹಾರ ಮತ್ತು ಬಟ್ಟೆಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ.