Tuesday, January 21, 2025
ಸುದ್ದಿ

ಚಂದ್ರಗ್ರಹಣ ಹಿನ್ನೆಲೆ ; ಜು. 16ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಅವಧಿಯಲ್ಲಿ ಬದಲಾವಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜು. 16ರಂದು ಪೂಜಾ ಅವಧಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ರಾತ್ರಿ 7ಕ್ಕೆ ನಡೆಯುವ ಮಹಾಪೂಜೆಯನ್ನು ಸಂಜೆ 6.30ಕ್ಕೆ ನಡೆಸಲಾಗುತ್ತದೆ. 7 ಗಂಟೆಯ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ. ಬೆಳಗ್ಗಿನಿಂದ ಮಧ್ಯಾಹ್ನದ ವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಬದಲಾವಣೆಯನ್ನು ಅರಿತ ಭಕ್ತರು ಎಲ್ಲಾ ರೀತಿಯಲ್ಲಿ ಸಹಕರಿಸಬೇಕು ಎಂದು ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು