Wednesday, January 22, 2025
ಸುದ್ದಿ

ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕಿಳಿದು ಯುವಕ ನೀರುಪಾಲು – ಕಹಳೆ ನ್ಯೂಸ್

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕಿಳಿದು ಆಟವಾಡುತ್ತಿದ್ದ ಚನ್ನರಾಯಪಟ್ಟಣದ ದೀಪಕ್(19) ಎಂಬುವರು ಶನಿವಾರ ಸಾಯಂಕಾಲ ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.

ದೀಪಕ್ ಬೆಂಗಳೂರಿನ ಐಟಿಐ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಸ್ನೇಹಿತರ ಜತೆ ಮಲ್ಪೆಗೆ ಪ್ರವಾಸ ಬಂದಿದ್ದರು. ನೀರಿಗಿಳಿಯಲು ನಿಷೇಧವಿದ್ದರೂ ಪ್ರಯತ್ನಿಸಿದ್ದ ತಂಡಕ್ಕೆ ಪೊಲೀಸರು ಎಚ್ಚರಿಕೆ ನೀಡಿ ವಾಪಸ್ ಕಳಿಸಿದ್ದರು. ಬಳಿಕ ಯುವಕರ ತಂಡ ಪೊಲೀಸರ ಕಣ್ಣು ತಪ್ಪಿಸಿ ಬೀಚ್‌ನ ದಕ್ಷಿಣ ಭಾಗದಲ್ಲಿ ಸಮುದ್ರಕ್ಕಿಳಿದು ಆಟವಾಡುತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾನುವಾರ ಸಾಕಷ್ಟು ಹುಡುಕಾಟ ನಡೆಸಿದರೂ ಯುವಕ ಪತ್ತೆಯಾಗಿಲ್ಲ. ಮಲ್ಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಮಳೆಗಾಲದಲ್ಲಿ ಸಮುದ್ರಕ್ಕೆ ಇಳಿಯದಂತೆ ಸಾಕಷ್ಟು ಸೂಚನೆಗಳನ್ನು ನೀಡಿದರೂ ಪ್ರವಾಸಿಗರು ನಮ್ಮ ಮಾತು ಕೇಳುವುದಿಲ್ಲ ಎಂದು ಇಲ್ಲಿನ ಲೈಫ್‌ಗಾರ್ಡ್ ಮತ್ತು ಪೊಲೀಸರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು