Recent Posts

Sunday, January 19, 2025
ಸುದ್ದಿ

ಹಿಂಜಾವೇ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

 

ಬೆಂಗಳೂರು : ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಅವರ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ಸರ್ಕಾರದ ಅಪೀಲು ಇತ್ಯರ್ಥ ಆಗುವವರೆಗೆ ಈ ಆದೇಶ ಊರ್ಜಿತದಲ್ಲಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾಧಿಕಾರಿ ನೀಡಿದ್ದ ಗಡಿಪಾರಿನ ಆದೇಶವನ್ನು ಪ್ರಶ್ನಿಸಿ ರತ್ನಾಕರ ಶೆಟ್ಟಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ಉಚ್ಚ ನ್ಯಾಯಾಲಯ ಗಡಿಪಾರಿನ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು ಜಿಲ್ಲಾಡಳಿತಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ರತ್ನಾಕರ ಶೆಟ್ಟಿ ಪರ ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response