Tuesday, January 21, 2025
ಸುದ್ದಿ

ಮೈತ್ರಿಗೆ ಮತ್ತೊಂದು ಅಘಾತ : ಕಾಂಗ್ರೆಸ್ ಶಾಸಕನಿಗೆ ಹೃದಯಾಘಾತ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಳೆದೊಂದು ವಾರದಿಂದ ಶಾಸಕರ ಹೈ ಡ್ರಾಮ ನಡೆಯುತ್ತಿದೆ. ಸರ್ಕಾರ ಬೀಳುತ್ತದೆ ಎಂಬ ಭೀತಿಯಲ್ಲಿರು ಮೈತ್ರಿ ಸರ್ಕಾರಕ್ಕೆ ಮತ್ತೊಂದು ಅಘಾತ ಎದುರಾಗಿದೆ.

ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ (48) ಅವರಿಗೆ ಗಂಭೀರ ಹೃದಯ ಸಮಸ್ಯೆ ಉಂಟಾಗಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ನಾಗೇಂದ್ರ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿಶ್ವಾಸಮತಯಾಚನೆ ಮಾಡುವ ವೇಳೆಗೆ ಅವರು ಆಗಮಿಸುತ್ತಾರೋ ಇಲ್ಲವೋ ಎಂಬ ಅನುಮಾನ ಮುಂದುವರೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾನುವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಬಿ. ನಾಗೇಂದ್ರ ಸದನಕ್ಕೆ ಗುರುವಾರ ಹಾಜರಾಗುವ ಬಗ್ಗೆ ವೈದ್ಯರು ನಿರ್ಧರಿಸಬೇಕಾಷ್ಟೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ವೇಳೆ ಹಾಜರಾಗಲು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು