Tuesday, January 21, 2025
ರಾಜಕೀಯ

ಕಾಂಗ್ರೆಸ್ ಶಾಸಕರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಕಲಾಪಕ್ಕೆ ತೆರಳುವ ಮುನ್ನ ಕಾಂಗ್ರೆಸ್ ಶಾಸಕರೊಂದಿಗೆ ಶಾಸಕಾಂಗ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನು ನಡೆಸಿದ್ದಾರೆ.

ತಾಜ್ ವಿವಾಂತ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರು, ಎಲ್ಲರೂ ಒಗ್ಗಟ್ಟಿನಿಂದ ಇರುವಂತೆ ಶಾಸಕರಿಗೆ ಸೂಚಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಅಂಚಿನಲ್ಲಿದ್ದು, ಇಂದಿನ ವಿಧಾನಸಭೆ ಕಲಾಪ ನಿರ್ಣಾಯಕವಾಗಿದೆ. ಕಾಂಗ್ರೆಸ್ ಶಾಸಕರೊಂದಿಗೆ ಸಿದ್ದರಾಮಯ್ಯ ಕೊನೆಯ ಕ್ಷಣದಲ್ಲಿ ಮಹತ್ವದ ಸಭೆಯನ್ನು ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ಶಾಸಕರಲ್ಲಿ ಸರ್ಕಾರ ಕಳೆದುಕೊಳ್ಳುವ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಶಾಸಕರೊಂದಿಗೆ ಮಾತನಾಡಿ, ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಸರ್ಕಾರ ಸುಭದ್ರವಾಗಿದೆ, ಆತಂಕ ಬೇಡ ಎಂದು ಭರವಸೆಯನ್ನು ನೀಡಿದ್ದಾರೆ. ಅಲ್ಲದೇ, ಸದನದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಶಾಸಕರಿಗೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದನದ ನಿಯಮಾವಳಿಗಳನ್ನು ಬಳಸಿಕೊಂಡು ಸ್ಪೀಕರ್ ಮೂಲಕ ಅತೃಪ್ತ ಶಾಸಕರನ್ನು ಮಣಿಸುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ತಂತ್ರ ವಿಫಲವಾಗಿದೆ. ಬಿಜೆಪಿ ಕಾರ್ಯತಂತ್ರ ಯಶಸ್ವಿಯಾಗಿದ್ದು, ದೋಸ್ತಿ ನಾಯಕರ ಕಾರ್ಯತಂತ್ರ ವಿಫಲವಾಗಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಕೊನೆ ಕ್ಷಣದಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದು ಕುತೂಹಲ ಮೂಡಿಸಿದೆ.