Wednesday, January 22, 2025
ಸುದ್ದಿ

ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ತರಗತಿಗಳ ಉದ್ಘಾಟನೆ – ಕಹಳೆ ನ್ಯೂಸ್

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಎಂ. ಸತೀಶ್ ಭಟ್ ಇವರು ಆಗಮಿಸಿದ್ದರು.

ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ನಂತರ ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಪ್ರಸ್ತುತ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಾಮುಖ್ಯತೆಯನ್ನು ವಿವರಿಸಿದರು ಮತ್ತು ವಿದ್ಯಾರ್ಥಿಗಳೆಲ್ಲರೂ ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ.ಸಂಕೀರ್ತ್ ಹೆಬ್ಬಾರ್ ವಿದ್ಯಾರ್ಥಿಗಳನ್ನುದ್ದೇಶಿಸಿ” ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ, ಅವರ ಆಸಕ್ತಿಗೆ ಯಾವುದೇ ಕುಂದು ಕೊರತೆ ಬರಬಾರದು ಎಂಬ ಉದ್ದೇಶದಿಂದ ಪ್ರಾರಂಭವಾದ ಈ ತರಗತಿಗಳು ಕಳೆದ 2 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳೆಲ್ಲರೂ ಪಡೆದುಕೊಳ್ಳಬೇಕು” ಎಂದು ನುಡಿದರು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ದೀಪಕ್ ಲಸ್ರಾಡೊ ಆಗಮಿಸಿದ್ದರು. ತರಬೇತಿ ತರಗತಿಗಳ ಸಂಯೋಜಕ, ಉಪನ್ಯಾಸಕ ರಘುರಾಮ್ ಭಟ್ ಸ್ವಾಗತಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅನುಶ್ರೀ ಎಂ. ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು