Wednesday, January 22, 2025
ರಾಜಕೀಯ

ರಾಜ್ಯದ ಭವಿಷ್ಯ ನಿರ್ಧರಿಸಲಿದ್ಯಾ ಅತೃಪ್ತ ಶಾಸಕರ ಅರ್ಜಿ ವಿಚಾರಣೆ..? – ಕಹಳೆ ನ್ಯೂಸ್

ಬೆಂಗಳೂರು: ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ ಎಂದು ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ಸುಪ್ರೀಂಕೋರ್ಟ್‍ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಸುಪ್ರೀಂ ತೀರ್ಪಿನ ಮೇಲೆ ದೋಸ್ತಿ ಸರ್ಕಾರದ ಭವಿಷ್ಯ ನಿಂತಿದೆ.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಒಳಗೊಂಡ ಸುಪ್ರೀಂಕೋರ್ಟ್ ಪೀಠ, ಸ್ಪೀಕರ್ ಗೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂಗೆ ಇದೆಯೋ? ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಲಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಪರಮಾಧಿಕಾರ ಎತ್ತಿ ಹಿಡಿದು ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ ಗೆ ಸೂಚನೆ ಕೊಟ್ಟಿದ್ದೇ ಆದಲ್ಲಿ, ಸರ್ಕಾರದ ಭವಿಷ್ಯ ಮಂಗಳವಾರವೇ ನಿರ್ಧರವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಪ್ರೀಂಕೋರ್ಟ್ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರೆ ಅತೃಪ್ತರಿಗೆ ರಿಲೀಫ್ ಸಿಗಲಿದ್ದು, ರಾಜೀನಾಮೆ ಪ್ರಕ್ರಿಯೆ ಇತ್ಯರ್ಥಕ್ಕೆ ಚಾಲನೆ ಸಿಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು