Wednesday, January 22, 2025
ಸುದ್ದಿ

ಅಸ್ಸಾಂನಲ್ಲಿ ಭಾರಿ ಪ್ರವಾಹ : ಸಂಕಷ್ಟಕ್ಕೆ ಸಿಲುಕಿದ 43 ಲಕ್ಷ ಜನ – ಕಹಳೆ ನ್ಯೂಸ್

ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮುಂದುವರಿದಿದ್ದು ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದ ಶೇ.95 ಭಾಗ ಹಾನಿಗೊಳಗಾಗಿದೆ’ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಸ್ಸಾಂನಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು. ಈ ತನಕ 43 ಲಕ್ಷ ಜನರು ಕಷ್ಟಕ್ಕೆ ಸಿಲುಕಿದ್ದಾರೆ. ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

‘ಪ್ರವಾಹದಿಂದ ಅತಿಹೆಚ್ಚು ಹಾನಿಗೀಡಾಗಿರುವ ಜಿಲ್ಲೆ ಬಾರಪೇಟಾ ಆಗಿದ್ದು, ಇಲ್ಲಿ 7.35 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾರಿಗಾಂವ್‍ನಲ್ಲಿ 3.50 ಲಕ್ಷ, ಧುಬ್ರಿಯಲ್ಲಿ 3.38 ಲಕ್ಷ ಜನರು ತೊಂದರೆಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ.

ಪ್ರವಾಹ ಪೀಡಿತ ಜನರಿಗೆ 7 ದಿನಗಳ ಪರಿಹಾರ ನೀಡುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಮೇಘಾಲಯದ ಪಶ್ಚಿಮ ಗಾರೊ ಗುಡ್ಡಗಾಡು ಜಿಲ್ಲೆಯಲ್ಲಿ ಪ್ರವಾಹದಿಂದ ಕನಿಷ್ಠ 1.14 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಮಣಿಪುರ, ಮಿಜೋರಾಂನಲ್ಲೂ ಪ್ರವಾಹ ಸ್ಥಿತಿ ಉಂಟಾಗಿದೆ.