ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಮತ್ತು ರಕ್ಷಣಾ ಸಿಬ್ಬಂದಿ 963 ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ.
ಈ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ವಿವಿಧ ಎನ್‍ಕೌಂಟರ್ ಗಳು ಮತ್ತು ವಿವಿಧ ಕಾರ್ಯಾಚರಣೆಗಳಲ್ಲಿ ಒಟ್ಟು 413 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.
ಫೆಬ್ರವರಿ 14 ರಂದು ಪುಲ್ವಾಮಾದ ಕೇಂದ್ರ ಮೀಸಲು ಪೊಲೀಸ್ ಪಡೆ ಮೇಲೆ ನಡೆದ ಭಯೋತ್ಪಾದಕ ದಾಳಿ ಸೇರಿದಂತೆ 2019ರಲ್ಲಿ ಭಾರತವು ಹಲವಾರು ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾಗಿದೆ, ಇದರಲ್ಲಿ ಕನಿಷ್ಠ 40 ಸಿಬ್ಬಂದಿ ಸಾವನ್ನಪ್ಪಿದ್ದಾರೆ.