Friday, January 24, 2025
ಸುದ್ದಿ

ಮುಂಬೈ ಭಯೋತ್ಪಾದನಾ ದಾಳಿಯ ಹಫೀಜ್ ಸಯೀದ್‌ ಬಂಧನ – ಕಹಳೆ ನ್ಯೂಸ್

ನವದೆಹಲಿ: ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಲಷ್ಕರ್-ಎ-ತೊಯಿಬಾ ಭಯೋತ್ಪಾದಕ ಸಂಘಟನೆಯ ಪ್ರಮುಖನಾಗಿದ್ದ ಈತ ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ 23 ಪ್ರಕರಣಗಳನ್ನು ಎದುರಿಸುತ್ತಿದ್ದ. 26/11 ಯಾರಿಗೆ ತಾನೆ ನೆನಪಿಲ್ಲ ಹೇಳಿ, ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಿ ನೂರಾರು ಮಂದಿ ಸಾವಿಗೆ ಕಾರಣವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದ ವಿರುದ್ಧವಾಗಿ ಪಾಕಿಸ್ತಾನದಲ್ಲಿ ಹಲವು ಪ್ರತಿಭಟನೆಗಳಲ್ಲಿ ಈತ ಮುಕ್ತವಾಗಿ ಪಾಲ್ಗೊಳ್ಳುತ್ತಿದ್ದ. ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಪಾಕಿಸ್ತಾನವು ಆತನ ಮೇಲೆ ಭಯೋತ್ಪಾದನೆ ಪ್ರಕರಣ ದಾಖಲಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈ ದಾಳಿ ನಡೆದು 10 ವರ್ಷ ಕಳೆದ ಸಂದರ್ಭದಲ್ಲಿ ಅಮೆರಿಕವು ಭಯೋತ್ಪಾದಕರನ್ನು ಬಂಧಿಸುವಂತೆ ಪಾಕಿಸ್ತಾನವನ್ನು ಒತ್ತಾಯಿಸಿತ್ತು.

2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗೂ ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.

ಮುಂಬಯಿ ಮಹಾನಗರ ಮೂರು ದಿನಗಳ ಕಾಲ ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಸಿಲುಕಿ ಅಕ್ಷರಶಃ ನರಕ ದರ್ಶನ ಮಾಡಿತು. ದಾಳಿ ಮುಗಿದು ಎಲ್ಲ ಉಗ್ರರನ್ನು ಭಾರತದ ಸೇನೆ ಹಾಗೂ ದೇಶದ ಆಂತರಿಕ ಪೋಲಿಸ್ ಪಡೆ ಹತ್ಯೆ ಮಾಡಿತು. ಅದರಲ್ಲಿ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲು ಸಫಲವಾಯಿತು.

2008ರ ನವೆಂಬರ್ 26 ರಂದು ಆರಂಭವಾದ ದಾಳಿ 29ರ ಶನಿವಾರದವರೆಗೂ ಬಿರುಸಾಗಿ ನಡೆಯಿತು. ಅಷ್ಟರಲ್ಲಿ ದೇಶದ ಸೇನಾ ಪಡೆಯೂ ಮುಂಬಯಿಗೆ ಧಾವಿಸಿ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಮೊದಲಾಯಿತು. ದಾಳಿಯ ಫಲವಾಗಿ ಸರ್ಕಾರಿ ಅಧಿಕಾರಿಗಳೂ, ಸಿಪಾಯಿಗಳು, ಸಾರ್ವಜನಿಕರೂ ಸೇರಿದಂತೆ 168 ಜನ ಪ್ರಾಣ ಕಳೆದುಕೊಂಡರು ಹಾಗೂ 400ಕ್ಕೂ ಮಿಗಿಲಾಗಿ ಗಾಯಾಳುಗಳಾಗಿ ಚಿಕಿತ್ಸೆ ಪಡೆದರು.

ಮುಂಬಯಿ ನಾಗರೀಕರು, ವಾಣಿಜ್ಯವಲಯದ ಪ್ರಮುಖರು ಒಳಗೊಂಡು ಮುಂಬಯಿ ವಾಸಿಗಳೆಲ್ಲರೂ ತೀವ್ರ ಆತಂಕಕ್ಕೆ ಈಡಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಭದ್ರತಾ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆದವು. ಈ ಮಧ್ಯೆ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ತಾನೇ ಹೊತ್ತುಕೊಂಡಿತು.

ದಕ್ಷಿಣ ಮುಂಬಯಿನ ಎಂಟು ವಿವಿಧ ಸ್ಥಳಗಳಲ್ಲಿ ದಾಳಿಗಳು ನಡೆದವು. ಮುಂಬಯಿ ಹೃದಯ ಭಾಗವಾದ ಛತ್ರಪತಿ ಶಿವಾಜಿ ಟರ್ಮಿನಸ್, ಗಣ್ಯರು ಹಾಗು ವಿದೇಶಿಗಳು ಹೆಚ್ಚಾಗಿ ಇರುವಂತಹ ಒಬೆರಾಯ್ ಟ್ರೈಡೆಂಟ್, ವಿಶ್ವ ವಿಖ್ಯಾತ ತಾಜ್ ಹೋಟೆಲ್, ಲಿಯೋಪೋಲ್ಡ್ ಕೆಫೆ, ಕಾಮಾ ಹಾಸ್ಪಿಟಲ್, ನಾರಿಮನ್ ಹೌಸ್, ಮೆಟ್ರೋ ಸಿನೆಮಾ, ಸೆಂಟ್ ಕ್ಸೇವಿಯರ್ ಕಾಲೇಜು ದಾಳಿಗೆ ಸಾಕ್ಷಿಯಾದ ಸ್ಥಳಗಳು. ಮೇಜ್ ಗಾವ್ ನಲ್ಲಿ ಒಂದು ಬಾಂಬನ್ನು ಸ್ಪೋಟಿಸಲಾಗಿತ್ತು.