Sunday, November 24, 2024
ಸುದ್ದಿ

ಫಿಲೋಮಿನಾದಲ್ಲಿ ಸಿಬಿಸಿಎಸ್ ಕುರಿತು ಓರಿಯೆಂಟೇಶನ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತೂರು: ಶಿಕ್ಷಣವು ಮಾನವನ ಬದುಕಿನಲ್ಲಿ ಪರಿಪೂರ್ಣತೆಯನ್ನು ತಂದುಕೊಡಬಲ್ಲ ಒಂದು ಪ್ರಮುಖ ಶೈಕ್ಷಣಿಕ ಪ್ರಕ್ರಿಯೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ಮತ್ತು ಸತತ ಪರಿಶ್ರಮವನ್ನು ಅಳವಡಿಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಪ್ರಯತ್ನಿಸಬೇಕು ಎಂದು ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಕೆ. ಚಂದ್ರಶೇಖರ್ ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಐಕ್ಯೂಎಸಿ ಮತ್ತು ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಜುಲೈ 16 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಆಯೋಜಿಸಲಾದ ಆಯ್ಕೆ ಆಧಾರಿತ ಕ್ರೆಡಿಟ್ ಸ್ಕೀಮ್ ಹಾಗೂ ಸಹ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಆಯ್ಕೆ ಕುರಿತು ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದರು. ಪದವಿ ಮಟ್ಟದಲ್ಲಿ ಸರ್ವಾಂಗೀಣ ವ್ಯಕ್ತಿತ್ವ ವಿಕಸನದ ಉದ್ದೇಶದಿಂದ ವಿದ್ಯಾರ್ಥಿಗಳು ಪಠ್ಯಧ್ಯಾಯನದೊಂದಿಗೆ ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅನಿವಾರ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಶೈಕ್ಷಣಿಕ ವರ್ಷ ಕಾಲೇಜಿನಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಗನುಗುಣವಾಗಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, ಕಲಿಕೆಯ ಜೊತೆಗೆ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಯು ತನ್ನನ್ನು ತಾನು ಗುರುತಿಸಿಕೊಳ್ಳಬಹುದು. ಶಿಕ್ಷಣ ಸಂಸ್ಥೆಯ ಎಲ್ಲಾ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಪ್ರತಿಯೊಬ್ಬರಿಗೂ ಸಾಧಿಸುವ ಛಲ ತನ್ನೊಳಗೆ ಇದ್ದರೆ ಸಾಧನೆಯ ಹಾದಿ ದೂರ ಇರದು ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಎನ್‍ಸಿಸಿ, ರೋವರ್ಸ್ ರೇಂಜರ್ಸ್, ಮಾನವ ಸಂಪನ್ಮೂಲ ಅಭಿವೃದ್ಧಿ, ಸಾಹಿತ್ಯ ಕಲೆ, ಲಲಿತ ಕಲೆ, ರಂಗಕಲೆ, ಗ್ರಾಹಕ ಶಿಕ್ಷಣ, ಪತ್ರಿಕೋದ್ಯಮ, ಪರಿಸರ ಶಿಕ್ಷಣ, ದೈಹಿಕ ಶಿಕ್ಷಣ ಮುಂತಾದ ಚಟುವಟಿಕೆಗಳ ಸಂಯೋಜಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಸಹ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಂಯೋಜಕ ಪ್ರೊ. ಉದಯ ಕೆ ವಿವಿಧ ವೇದಿಕೆಗಳ ಸಂಯೋಜಕರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಐಕ್ಯೂಎಸಿ ಸಂಯೋಜಕ ಡಾ. ಎ. ಪಿ. ರಾಧಾಕೃಷ್ಣ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಭಾರತಿ ಎಸ್ ರೈ ಕಾರ್ಯಕ್ರಮ ನಿರೂಪಿಸಿದರು.