Thursday, January 23, 2025
ರಾಜಕೀಯ

ಸರ್ಕಾರ ಉಳಿಸಿಕೊಳ್ಳುವತ್ತ ಸಿಎಂ ಕೊನೆಯ ಪ್ರಯತ್ನ – ಕಹಳೆ ನ್ಯೂಸ್

ಬೆಂಗಳೂರು: ಪತನದ ಅಂಚಿನಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ಬಂಡಾಯ ನಾಯಕರನ್ನು ಭೇಟಿಯಾಗಲು ಕೊನೆಯ ಪ್ರಯತ್ನ ಮಾಡಿದ್ದಾರೆ.

ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ  ರಾಜೀನಾಮೆ ವಾಪಸ್ ಪಡೆದುಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಎಐಸಿಸಿ ಮುಖಂಡರು, ರೋಷನ್ ಬೇಗ್ ಅವರನ್ನು ರಾಜಿನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬುಧವಾರ ರಾತ್ರಿ ಪ್ರಕೃತಿ ರೆಸಾರ್ಟ್‍ಗೆ ಭೇಟಿ ನೀಡಿದ, ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರನ್ನು ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು