Monday, November 25, 2024
ಸುದ್ದಿ

ಅಡಿಕೆ ದೇಹಕ್ಕೆ ಹಾನಿಕಾರಕವಲ್ಲ; ಕೇಂದ್ರ ಸಚಿವರಿಗೆ ಮನವಿ ಮಾಡಿದ ಸಂಸದರು – ಕಹಳೆ ನ್ಯೂಸ್

ಮಂಗಳೂರು: ಅಡಿಕೆಯು ದೇಹಕ್ಕೆ ಹಾನಿಕಾರಕವಲ್ಲ, ಅಡಿಕೆ ಸೇವಿಸುವುದರಿಂದ ಮಾನವನ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ  ಆಗುವುದಿಲ್ಲ ಎಂದು ಅಡಿಕೆ ಬೆಳೆಗಾರರ ಪ್ರದೇಶದ ಸಂಸದರುಗಳು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರಿಗೆ ಮನವರಿಕೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಆರೋಗ್ಯ ಸಚಿವರನ್ನು ಭೇಟಿ ಆಗಿದ್ದಾರೆ. ಜುಲೈ 12, 2019 ರಂದು ಅಡಿಕೆ ಬಳಕೆಯ ಕುರಿತು ಚುಕ್ಕೆ ರಹಿತ ಪ್ರಶ್ನೆಗೆ ಸರಕಾರವು, ಅಡಿಕೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್‍ನಲ್ಲಿರುವ ಅಫಿಡವಿಟ್‍ನ್ನು ಉಲ್ಲೇಖ ಮಾಡಿ ನೀಡಿದ ಉತ್ತರದ ಬಗ್ಗೆ ಸಚಿವರನ್ನು ಭೇಟಿ ಮಾಡಿದರು. ಭೇಟಿಯಾಗಿ ಅಡಿಕೆಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂಬುದರ ಬಗ್ಗೆ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಯು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ ಎಂಬುವುದು ಸಚಿವರಿಗೆ ಸಂಸದರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಸ್ಪಂದಿಸಿದ ಸಚಿವರು ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯು.ಪಿ.ಎ ಸರಕಾರ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿರುವುದರಿಂದ ಈ ಅಫಿಡವಿಟ್‍ನ್ನು ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್ ನಿಂದ ಅಫಿಡವಿಟ್ ನ್ನು ಹಿಂದಕ್ಕೆ ಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಂಸದರ ನಿಯೋಗದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮುಂತಾದವರಿದ್ದರು.