Wednesday, November 27, 2024
ಸುದ್ದಿ

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ – ಶಾಲಾ ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಅರ್ಧ ಮಳೆಗಾಲ ಮುಗಿದರೂ ಕರಾವಳಿ ಭಾಗದಲ್ಲಿ ಈ ಭಾರಿ, ಅಂತ ಮಳೆಯಾಗಲಿಲ್ಲ. ಆದರೆ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕರ್ನಾಟಕ ಕರಾವಳಿ ಭಾಗದಲ್ಲಿ ಇನ್ನೆರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸೂಚನೆಯಿದ್ದು, ನಾಳೆಯಿಂದ ಸೋಮವಾರದವರೆಗೆ 200mm ಮೇಲ್ಪಟ್ಟು ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂರು ದಿನಗಳಲ್ಲಿ ಮೀನುಗಾರಿಕೆಗೆ ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು, ಹಾಗೂ ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ತೆರಳದಂತೆ ಎಚ್ಚರವಹಿಸಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳನ್ನು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಮುನ್ನೆಚ್ಚರಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು