Thursday, January 23, 2025
ಸುದ್ದಿ

ಸುಳ್ಯ ತಹಶೀಲ್ದಾರ್ ವರ್ಗಾವಣೆ ವಿರುದ್ಧ ಭುಗಿಲೆದ್ದ ಆಕ್ರೋಶ; ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಪ್ರತಿಭಟನೆ – ಕಹಳೆ ನ್ಯೂಸ್

ಸುಳ್ಯ ತಹಶೀಲ್ದಾರ್ ಎನ್.ಎ. ಕುಂಞ ಅಹಮ್ಮದ್ ಅವರ ವರ್ಗಾವಣೆ ವಿರುದ್ದ ಆಕ್ರೋಶ ಭುಗಿಲೆದ್ದಿದ್ದು, ವರ್ಗಾವಣೆ ವಿರೋಧಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಗಿರಿಧರ್ ನಾಯ್ಕ್ ಮಾತನಾಡಿ ಸುಳ್ಯಕ್ಕೆ ಬಂದ ಕೆಲವೇ ತಿಂಗಳಲ್ಲಿ ಜನಪರ ಅಧಿಕಾರಿ ಎಂದು ಹೆಸರುಗಳಿಸಿರುವ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಿಸಲಾಗಿದೆ. ಇದರ ವಿರುದ್ಧ ಅಹೋರಾತ್ರಿ ಧರಣಿ ನಡೆಸಲಾಗುವುದು. ಸಹಾಯಕ ಕಮಿಷನರ್ ಅಥವಾ ಜಿಲ್ಲಾಧಿಕಾರಿಗಳು ಸುಳ್ಯಕ್ಕೆ ಬಂದು ವರ್ಗಾವಣೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡದಿದ್ದರೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಕುಂಞ ಅಹಮ್ಮದ್ ಪ್ರತಿಭಟನಾಕಾರರೊಂದಿಗೆ ಮಾತನಾಡಿ ನನ್ನ ಕೋರಿಕೆಯಂತೆ ವರ್ಗಾವಣೆ ಆಗಿದೆ. ಯಾವುದೇ ಪಿತೂರಿ ಇಲ್ಲ ಎಂದು ಹೇಳಿದರು. ಬಳಿಕ ಸುಳ್ಯ ಠಾಣಾ ಉಪ ನಿರೀಕ್ಷಕ ಹರೀಶ್ ಕುಮಾರ್ ದೂರವಾಣಿ ಮೂಲಕ ಸಹಾಯಕ ಕಮಿಷನರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿ, ಅವರು ನೀಡಿದ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂದೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ್ ಪಾಟಾಜೆ, ನ್ಯಾಯವಾದಿ ಪ್ರದೀಪ್ ಕುಮಾರ್ ಕೆ.ಎಲ್, ಮುಖಂಡರಾದ ಕೆ.ಕೆ. ನಾಯ್ಕ್, ಪರಮೇಶ್ವರ, ವಿಠಲ ರೈ ಪೋಲಾಜೆ, ಕುಶಾಲಪ್ಪ ಗೌಡ, ವಿಜಯ ಪಾಟಾಜೆ, ಮಂಜುನಾಥ ಐವರ್ನಾಡು ಮೊದಲಾದವರು ಉಪಸ್ಥಿತರಿದ್ದರು.