Wednesday, January 22, 2025
ಸುದ್ದಿ

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರ ಸಭೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಜುಲೈ 23ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ, ಹಿರಿಯ ನಾಗರಿಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಕುಕ್ಕೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಚಂದಪ್ಪ ಗೌಡ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಹಿರಿಯ ನಾಗರಿಕರ ಸಮಸ್ಯೆ ಬಗ್ಗೆ ಅಹವಾಲು ಸ್ವೀಕರಿಸಲಾಯಿತು. ಜೊತೆಗೆ ಸರಕಾರದ ಆದೇಶದ ಮೇರೆಗೆ ಕ್ಷಯರೋಗದ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮದಲ್ಲಿ ಅರೋಗ್ಯ ಅಧಿಕಾರಿಗಳು, ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಊರಿನ ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು