ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಸರಕಾರಿ ಪ್ರೌಢಶಾಲೆ ದುಗಲಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶೀಲಾವತಿ ಮಾಧವ ಇವರಿಗೆ ಗಿಡವನ್ನು ಹಸ್ತಾಂತರ ಮಾಡುವ ಮೂಲಕ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭೂಮಿಯಲ್ಲಿ ಹೆಚ್ಚುತ್ತಿರುವ ತಾಪಮಾನ ಹಾಗೂ ನೀರಿನ ಸಮಸ್ಯೆ ಹೋಗಲಾಡಿಸಲು ಪರಿಸರವನ್ನು ಉಳಿಸಲು ಗಿಡಗಳನ್ನು ನೆಟ್ಟು ಬೆಳೆಸುವುದು ನಮ್ಮ ಆದ್ಯ ಕರ್ತವ್ಯವೆಂದು ಮುಖ್ಯ ಅತಿಥಿ ಶೀಲಾವತಿ ಮಾಧವ ತಿಳಿಸಿ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನಮೋಹನ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್‍ನ ಅಧ್ಯಕ್ಷೆ ಶೀಲಾವತಿ ಮಾಧವ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಮಾಧವ ದುಗಲಡ್ಕ, ಎಸ್‍ಡಿಎಂಸಿ ಸದಸ್ಯ ಶುಭಕರ, ದುಗಲಡ್ಕ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳು ಸುಬ್ರಹ್ಮಣ್ಯ ಅತ್ಯಾಡಿ, ನೆಹರೂ ಮೆಮೋರಿಯಲ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ವಿಷ್ಣು ಪ್ರಶಾಂತ್ ಬಿ, ಉಪನ್ಯಾಸಕ ರಾಕೇಶ್ ನಾಯಕ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು 120 ಗಿಡಗಳನ್ನು ನೆಡುವುದರ ಜೊತೆಗೆ ಇಂಗು ಗುಂಡಿಯನ್ನು ನಿರ್ಮಿಸುವ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕುಮಾರಿ ಕಾವ್ಯ ಪ್ರಾರ್ಥಿಸಿ, ಕುಮಾರ್ ಲೋಹಿತ್ ಬಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಉಪನ್ಯಾಸಕ ರಾಕೇಶ್ ನಾಯಕ್ ಅವರು ಅಭಿನಂದನೆ ಸಲ್ಲಿಸಿದರು.