Thursday, January 23, 2025
ಸುದ್ದಿ

ಸಿಎಂ ಗದ್ದುಗೆ ಏರಲು ಬಿ ಎಸ್ ಯಡಿಯೂರಪ್ಪ ಸಜ್ಜು; ಬಿಜೆಪಿ ಕಾರ್ಯಕರ್ತರ ಸಂಭ್ರಮ –ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ವಿಶ್ವಾಸಮತ ಕಳೆದುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ ಬಳಿಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ವೇದಿಕೆ ಸಜ್ಜಾಗುತ್ತಿದೆ.

ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲು ಹೊರಟಿರುವ ಬಿ ಎಸ್ ಯಡಿಯೂರಪ್ಪನವರಿಗೆ ಇಂದು ಬೆಳಗ್ಗೆಯಿಂದಲೇ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು, ಅವರ ಅಭಿಮಾನಿಗಳು ಇಂದು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಬಿಎಸ್‍ವೈ ನಿವಾಸದ ಮುಂದೆ ಜಮಾಯಿಸಿ, ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ, ಹೂಗುಚ್ಛ ನೀಡಿ ಸಂಭ್ರಮಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು