Saturday, November 23, 2024
ರಾಜಕೀಯ

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಮಧ್ಯಪ್ರದೇಶದ ಆಡಳಿತಾರೂಢ ಕಾಂಗ್ರೆಸ್‍ನಲ್ಲೂ ಭಿನ್ನಮತ – ಕಹಳೆ ನ್ಯೂಸ್

ಭೂಪಾಲ್: ಕರ್ನಾಟಕದಲ್ಲಿ ಅತೃಪ್ತ ಶಾಸಕರಿಂದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಮಧ್ಯಪ್ರದೇಶದ ಆಡಳಿತಾರೂಢ ಕಾಂಗ್ರೆಸ್‍ನಲ್ಲೂ ಭಿನ್ನಮತ ಭುಗಿಲೆದ್ದಿದೆ.

ಮಧ್ಯಪ್ರದೇಶದ ಕಾಂಗ್ರೆಸ್‍ನಲ್ಲೂ ಶಾಸಕರ ಅಸಮಾಧಾನ ಸ್ಫೋಟಗೊಂಡಿದೆ. ಇದರಿಂದ ಕಾಂಗ್ರೆಸ್ ವರಿಷ್ಠರು ಆತಂಕಕ್ಕೊಳಗಾಗಿದ್ದಾರೆ. ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಎಸ್‍ಪಿ, ಎಸ್‍ಪಿ ಬೆಂಬಲದ ನಡುವೆ ಭಿನ್ನಮತ ತಲೆದೋರಿದೆ. ಈ ಕಾರಣದಿಂದಾಗಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ಅದಕ್ಕೆ ನಾವು ಹೊಣೆಗಾರರಲ್ಲ. ಅಂತಹ ಬೆಳವಣಿಗೆ ಕಂಡು ಬಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ನಮ್ಮನ್ನು ದೂಷಿಸಬೇಡಿ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿವರಾರಿಜ್‍ಸಿಂಗ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಪ್ರತಿಕ್ರಿಯೆ ನೀಡಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಸಮಸ್ಯೆಗಳನ್ನು ತಂದೊಡ್ಡುವುದಕ್ಕೆ ಬಿಜೆಪಿ ಎಲ್ಲವನ್ನೂ ಮಾಡಿದೆ ಎಂದು ಆರೋಪಿಸಿದ್ದಾರೆ.
ಕುಮಾರಸ್ವಾಮಿ ಸರ್ಕಾರದ ರೀತಿಯಲ್ಲೇ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನೂ ಸಹ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಬಿಜೆಪಿ ಹಾಗೂ ಉನ್ನತ ವರಿಷ್ಠರು ಸಹ ಕೈ ಜೋಡಿಸಿದ್ದಾರೆ ಎಂದು ಪಟ್ವಾರಿ ಆರೋಪಿಸಿದ್ದಾರೆ.