Friday, January 24, 2025
ಸುದ್ದಿ

ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ: ಸ್ಮೃತಿ ಇರಾನಿ ಅವರಿಂದ ರಾಜ್ಯ ಸಭೆಯಲ್ಲಿ ವಿಧೇಯಕ ಮಂಡನೆ – ಕಹಳೆ ನ್ಯೂಸ್

ನವದೆಹಲಿ: ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ತಿದ್ದುಪಡಿ ವಿಧೇಯಕವೊಂದನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ, ತಿದ್ದುಪಡಿ ಮಸೂದೆ 2019ರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ.

ನಂತರ ಮಾತನಾಡಿದ ಇರಾನಿ, ಲೈಂಗಿಕತೆಯ ದೃಶ್ಯ ಚಿತ್ರಣವನ್ನು ತೋರಿಸುವುದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಎಂದು ಮಸೂದೆ ಪರಿಗಣಿಸುತ್ತದೆ ಎಂದು ಹೇಳಿದ್ದಾರೆ. ಇದು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸಲು ಸಹ ಅವಕಾಶ ನೀಡುತ್ತದೆ ಎಂದು ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸುವುದಕ್ಕಾಗಿ ಜೀವಾವಧಿ ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆಯನ್ನು ಮಸೂದೆ ಒದಗಿಸುತ್ತದೆ. ಬಲವಾದ ದಂಡ ವಿಧಿಸುವಿಕೆಯಿಂದಾಗಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ತಡೆಯೊಡ್ಡುವ ಉದ್ದೇಶದಿಂದ ಈ ಕಾನೂನು ರೂಪಿಸಲಾಗಿದೆ ಎಂದು ಹೇಳಿದರು. ಮಸೂದೆಯನ್ನು ಈಗಾಗಲೇ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು