Monday, January 20, 2025
ಸುದ್ದಿ

ಲಾರಿ-ಬೈಕ್ ನಡುವೆ ಡಿಕ್ಕಿ ; ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ – ಕಹಳೆ ನ್ಯೂಸ್

ಮೈಸೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಎಚ್.ಡಿ.ಕೋಟೆ ತಾಲೂಕಿನ ಕಂದೇಗಾಲ ನಿವಾಸಿ ರಾಘವೇಂದ್ರ (25), ಕಂಚಮಳ್ಳಿ ನಿವಾಸಿ ಮಧುಕುಮಾರ್ (19), ನಂಜನಗೂಡು ತಾಲೂಕಿನ ಹುರಾ ಗ್ರಾಮದ ಮಧು ಮತ್ತು ಒಡಿಸ್ಸಾ ಮೂಲದ ಅಹಮ್ಮದ್ ಖಾನ್ ಎನ್ನುವವರು ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರೆಲ್ಲರೂ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿಕೊಂಡು ಹಿಂದಿರುಗುವ ವೇಳೆ ನಡುರಾತ್ರಿಯಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಡಿಕ್ಕಿ ಸಂಭವಿಸಿದೆ. ಮೃತರೆಲ್ಲರೂ ಮೈಸೂರಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದರೆಂದು ಮಾಹಿತಿ ಇದೆ. ಮೃತದೇಹಗಳನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು