Tuesday, January 21, 2025
ರಾಜಕೀಯ

ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು: ಸರ್ಕಾರ ಪತನದ ಬೆನ್ನಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಖತಂ..? – ಕಹಳೆ ನ್ಯೂಸ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಕಾರಣ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು.

ಆದರೆ ಮೈತ್ರಿಯಿಂದ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು ಎಂಬ ಭಾವನೆ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ. ಅದರಲ್ಲಿಯೂ ಲೋಕಸಭೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಸಂದರ್ಭದಲ್ಲಿ ನಾಯಕರು ಬಹಿರಂಗವಾಗಿಯೇ ಮೈತ್ರಿಯ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕವೂ ಮೈತ್ರಿ ಕುರಿತಾಗಿ ಚರ್ಚೆ ನಡೆದಿದೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು. ಇದರಿಂದ ಯಾವುದೇ ಲಾಭವಾಗಿಲ್ಲ. ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಆತ್ಮಾವಲೋಕನ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಮೈತ್ರಿಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಕೆಲವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಗೆ ಹೋಗಿದ್ದಾರೆ. ಪಕ್ಷದ ವಿವಿಧ ಸಂಘಟನೆಗಳು ಚದುರಿ ಹೋಗಿದ್ದು, ರಾಜೀನಾಮೆ ನೀಡಿದ ಶಾಸಕರೊಂದಿಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ದೂರವಾಗಲಿದ್ದಾರೆ. ಇಂತಹ ಸಂದರ್ಭದಲ್ಲಿ ಮೈತ್ರಿ ವಿಚಾರ ಪ್ರಸ್ತಾಪಿಸಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಮೈತ್ರಿಯಿಂದಾಗಿ ಕಾಂಗ್ರೆಸ್ ಪಕ್ಷ ಪಡೆದಿದ್ದಕ್ಕಿಂತ ಕಳೆದುಕೊಂಡಿದ್ದೆ ಹೆಚ್ಚಾಗಿದೆ. ಪಕ್ಷಕ್ಕೆ ಲಾಭವಾಗಿಲ್ಲ, ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.