Wednesday, January 22, 2025
ಸುದ್ದಿ

ಮಳೆಗಾಲದಲ್ಲೇ ಜೀವಜಲಕ್ಕೆ ಬರ – ಕಹಳೆ ನ್ಯೂಸ್

ಕಲಬುರಗಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆದರೆ, ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದ್ದು, ಕುಡಿಯುವ ನೀರಿಗೂ ಪರದಾಟ ಮುಂದುವರಿದಿದೆ. ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಯಲ್ಲಿ 229 ಗ್ರಾಮಗಳಿಗೆ ಟ್ಯಾಂಕರ್ ನೀರೇ ಗತಿಯಾಗಿದೆ.

ಕಳೆದ ಮೂರು ವರ್ಷಗಳಿಂದ ಸತತ ಹಿಂಗಾರು ಮತ್ತು ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಪ್ರಸಕ್ತ ವರ್ಷ ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದರೂ ನಿರೀಕ್ಷಿತ ಮಳೆ ಸುರಿಯುತ್ತಿಲ್ಲ. ಆದ್ದರಿಂದ ಕಳೆದ ಬೇಸಿಗೆಯಲ್ಲಿ ಆರಂಭವಾದ ಟ್ಯಾಂಕರ್ ನೀರು ಪೂರೈಕೆ ಇನ್ನೂ ಮುಂದುವರಿದಿದೆ. ಜಿಲ್ಲೆಯಲ್ಲಿ ಹಳ್ಳ, ಕೊಳ್ಳ, ಕೊಳವೆ ಬಾವಿಗಳು ಬತ್ತಿ ಹೋಗಿ ನೀರಿನ ಸಮಸ್ಯೆ ತಾರಕಕ್ಕೇರಿದ್ದರಿಂದ ಕಳೆದ ಏಪ್ರಿಲ್‍ನಲ್ಲಿ ಜಿಲ್ಲಾಡಳಿತ 750ಕ್ಕೂ ಅಧಿಕ ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

750 ಗ್ರಾಮಗಳ ಪೈಕಿ 200ಕ್ಕೂ ಹೆಚ್ಚು ಗ್ರಾಮಗಳು ಜಲ ಮೂಲಗಳನ್ನೇ ಕಳೆದುಕೊಂಡಿವೆ. ಪರಿಣಾಮ ಮಳೆಗಾಲದಲ್ಲೂ ಜೀವ ಜಲಕ್ಕಾಗಿ ಗ್ರಾಮೀಣ ಭಾಗದ ಜನತೆ ಪರಿತಪಿಸುವಂತಾಗಿದ್ದು, ಜನ ಜೀವನ ಹೀನಾಯ ಸ್ಥಿತಿಗೆ ತಲುಪುವಂತೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿ ದಿನ 527 ಟ್ರಿಪ್ ನೀರು ಕೊಂಡೋಯ್ಯಬೇಕಾಗಿದೆ. ಸರಿಯಾಗಿ ಮಳೆಯಾಗದ ಕಾರಣ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಇಂದಿಗೂ 229 ಗ್ರಾಮಗಳ ಗ್ರಾಮಸ್ಥರು ಟ್ಯಾಂಕರ್ ನೀರನ್ನು ಅವಲಂಬಿತರಾಗಿದ್ದಾರೆ. ಜಿ.ಪಂ ವತಿಯಿಂದ ಗ್ರಾಮಗಳಿಗೆ ವಿವಿಧ ಜಲ ಮೂಲಗಳಿಂದ ನೀರು ಪೂರೈಸುವ ಕಾರ್ಯವಾಗುತ್ತಿದೆ.