Friday, January 24, 2025
ಸುದ್ದಿ

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗ ಮೇಳ – ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವ ವಿದ್ಯಾನಿಲಯ ಹಾಗೂ ಶ್ರೀನಿವಾಸ ಸಮೂಹ ಸಂಸ್ಥೆಗಳ ವತಿಯಿಂದ ಜು. 27ರಂದು ಪಾಂಡೇಶ್ವರದಲ್ಲಿರುವ ಸಿಟಿ ಕ್ಯಾಂಪಸ್‍ನಲ್ಲಿ’ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಶ್ರೀನಿವಾಸ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಪಿ. ಎಸ್. ಐತಾಳ ಅವರು ಮಾಹಿತಿ ನೀಡಿದ್ದಾರೆ. ಶಿಕ್ಷಣದೊಂದಿಗೆ ಸಾಮಾಜಿಕ ಸೇವೆಗಳಲ್ಲೂ ಶ್ರೀನಿವಾಸ ಸಂಸ್ಥೆ ಮಹತ್ತರ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗೆ ಅರ್ಹ ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಯೋಗ ಮೇಳದಲ್ಲಿ ಭಾಗವಹಿಸಲು 85ಕ್ಕೂ ಅಧಿಕ ಕಂಪೆನಿಗಳು ಈಗಾಗಲೇ ಹೆಸರು ನೋಂದಾಯಿಸಿಕೊಂಡಿವೆ. 100ಕ್ಕೂ ಮಿಕ್ಕಿ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪಾರ್ಟ್ ಟೈಮ್ ಉದ್ಯೋಗ ಮಾಡುತ್ತಿರುವ ಉದ್ಯೋಗಿಗಳು, ಅಪ್ರಂಟಿಸ್ ಶಿಪ್, ಪ್ರಾಜೆಕ್ಟ್ ತರಬೇತಿ ಪಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳು, ಫ್ರೀ ಲಾನ್ಸ್ ಕಾರ್ಯಕರ್ತರು ಹಾಗೂ ಇತರ ಅಭ್ಯರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆಯಬಹುದು.

ಎಸ್ಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪಾಲಿಟೆಕ್ನಿಕ್ ಸಹಿತ ಇತರ ಯಾವುದೇ ಪದವಿ ಸ್ನಾತಕೋತ್ತರ ಪದವಿ ಪಡೆದ ಕಾಲೇಜು ವಿದ್ಯಾರ್ಥಿಗಳು ಹಾಗೂ ಜನ ಸಾಮಾನ್ಯರು ಈ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಉದ್ಯೋಗಾಕಾಂಕ್ಷಿಗಳು ಉತ್ತಮ ಉಡುಗೆಯೊಂದಿಗೆ ತಮ್ಮ ಸ್ವ – ಪರಿಚಯ ಪತ್ರ, ಗುರುತುಪತ್ರ, ಭಾವ ಚಿತ್ರ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು. ಸ್ಥಳದಲ್ಲಿಯೇ ನೋಂದಣಿ ಸೌಲಭ್ಯವನ್ನು ಒದಗಿಸಲಾಗುವುದು ಎಂದು ತಿಳಿಸಿದರು.