ಕಾಬುಲ್: ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಕಾಬುಲ್‍ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್‍ನ ಮಕ್ರೋರಯಾನ್ ಪ್ರಾಂತ್ಯದಲ್ಲಿರುವ ಗಣಿಗಾರಿಕೆ ಮತ್ತು ಪೆಟ್ರೋಲಿಯಂ ಸಚಿವಾಲಯವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಸತತ ಮೂರು ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಆಫ್ಘಾನಿಸ್ತಾನದ ಆಂತರಿಕ ಸಚಿವಾಲಯ ಕೂಡ ಸ್ಪಷ್ಟನೆ ನೀಡಿದ್ದು ಇಂದು ನಡೆದ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ಉಗ್ರರು ಈ ದಾಳಿ ನಡೆಸಿದ್ದಾರೆ. ಗಣಿಗಾರಿಕೆ ಮತ್ತು ಪೆಟ್ರೋಲಿಯಂ ಸಚಿವಾಲಯವೇ ಉಗ್ರ ಟಾರ್ಗೆಟ್ ಆಗಿರುವ ಶಂಕೆ ಇದೆ ಎಂದು ಮಾಹಿತಿ ನೀಡಿದೆ.