Tuesday, January 21, 2025
ಸುದ್ದಿ

ಹಿರಿಯ ಪತ್ರಕರ್ತ ವಿಜೇಶ್ ಕಾಮತ್ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಡೆಕ್ಕನ್ ಹೆರಾಲ್ಡ್ ಇಂಗ್ಲಿಷ್ ಪತ್ರಿಕೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ವಿಜೇಶ್ ಕಾಮತ್ ಇತ್ತೀಚೆಗೆ ಕೆಲವು ತಿಂಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕುಟುಂಬದ ಮೂಲಗಳು ತಿಳಿಸಿರುವಂತೆ ವಿಜೇಶ್ ಕಾಮತ್ ಅವರು ನಿನ್ನೆ ರಾತ್ರಿ ಮಲ್ಲೇಶ್ವರದ ಗಾಯತ್ರಿ ನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಇತ್ತೀಚೆಗೆ ಆರೋಗ್ಯ ಹದಗೆಟ್ಟಿದ್ದ ಅವರನ್ನು ಬುಧವಾರ ಸಂಜೆ ನಗರದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲೇ ಅವರು ನಿಧನರಾಗಿದ್ದರು. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು