Sunday, November 24, 2024
ರಾಜಕೀಯ

ಇಂದು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

India's ruling Bharatiya Janata Party (BJP) leader B. S. Yeddyurappa flashes the victory sign after taking oath as Chief Minister of the southern state of Karnataka inside the governor's house in Bengaluru, India, May 17, 2018. REUTERS/Abhishek N. Chinnappa

ಬೆಂಗಳೂರು: ಕೊನೆಗೂ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ, ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಇಂದೇ ಪ್ರಮಾಣವಚನ ಸ್ವೀಕರಿಸಲು ಅವಕಾಶ ಕೋರಲಿದ್ದಾರೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲು ಮನವಿ ಸಲ್ಲಿಸಲಿದ್ದಾರೆ. ಇಂದು ಯಡಿಯೂರಪ್ಪ ಒಬ್ಬರು ಮಾತ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ತೆರಳುವ ಮುಂಚೆ ಯಡಿಯೂರಪ್ಪ ತಮ್ಮ ನಿವಾಸದ ಬಳಿಯಿರುವ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.